ಈಗ ಬರೆದಿದ್ದೇನೆ, ಏನು ವಿಶೇಷ?
ಗೆಳೆಯ ನಾಗೇಶರಾಯರಿಗೆ - ನಮಸ್ಕಾರಗಳು.
ಅತ್ತ ಕಡೆ ಬರಲೂ ಇಲ್ಲ - ಪತ್ರವನ್ನೂ ಬರೆಯಲಿಲ್ಲ ಎಂಬ ಸಿಟ್ಟು ಸಹಜವಾಗಿ ಇರಬಹುದು. ಈಗ ಬರೆದಿದ್ದೇನೆ, ಏನು ವಿಶೇಷ?
ವಾರ್ತಾಲೋಕ - ಇದೆ. ನಾನು ಇದ್ದೇನೆ.
ಶ್ರೀ ಅನಂತಸುಬ್ಬರಾಯರಿಗೆ ನಮಸ್ಕಾರ ತಿಳಿಸಿ, ದಯವಿಟ್ಟು.
ನಿಮ್ಮ
ಪ.ಗೋಪಾಲಕೃಷ್ಣ
10.4.64
P. Gopalakrishna
Varthaloka
Mangalore - 1
South Kanara

ಇ-ಮೇಲ್, ಬ್ಲಾಗ್ ಯುಗದ ನಮ್ಮಂಥವರೂ ಸಹಾ ಕೇವಲ ಇಪ್ಪತ್ತು ವರ್ಷಗಳ ಹಿಂದೆ ಅಂಚೆಯ ಮೂಲಕವೇ communicate ಮಾಡುತ್ತಿದ್ದೆವು. ನಮ್ಮ ಹಿಂದಿನ ತಲೆಮಾರಿನವರು ಅಂಚೆ ಕಾರ್ಡಿನಲ್ಲಿ ಬರೆಯುತ್ತಿದ್ದರು. ಗೌಪ್ಯತೆಗೆ ಅಲ್ಲಿ ಅವಕಾಶವೇ ಇಲ್ಲ. ಕಚೇರಿ ಅಥವಾ ಮನೆಯ ವಿಳಾಸಕ್ಕೆ ಬಂದ ಕಾರ್ಡು ಕೈ ದಾಟಿದವರೆಲ್ಲರಿಂದಲೂ ಓದಿಸಿಕೊಳ್ಳುತ್ತಿತ್ತು. ಕೆಲವು ಪೋಸ್ಟ್‍ಮನ್‍ಗಳು ಅಂಚೆ ಕಾರ್ಡುಗಳನ್ನು ಓದುವುದು ತಮ್ಮ ಹಕ್ಕೆಂದೇ ಭಾವಿಸುತ್ತಿದ್ದರು.
ಆ ಮಾತು ಬದಿಗಿರಲಿ. ನನ್ನಪ್ಪ (ಸಂ.ಕ.ದ ನಿವೃತ್ತ ಸ್ಥಾನಿಕ ಸಂಪಾದಕ ಹೆಚ್.ಆರ್.ನಾಗೇಶರಾವ್) ನನಗೆ ಆಲದ ಮರದ ಬದಲು ಖನಿಜಭರಿತ ಗಣಿಯೊಂದನ್ನು ಬಿಟ್ಟು ಹೋಗಿದ್ದಾರೆ. ಅಕ್ರಮವೊ, ಸಕ್ರಮವೊ ಗೊತ್ತಿಲ್ಲ, ಉತ್ಖನನ ಮಾಡುತ್ತಿದ್ದೇನೆ. ಸಿಕ್ಕ ದಾಖಲೆಗಳನ್ನು ಯಾವುದೋ ಸಂದರ್ಭದಲ್ಲಿ ಅವರೊಂದಿಗೆ ನಡೆಸಿದ ಮಾತುಕತೆಯನ್ನು ನನ್ನ ನೆನಪಿನ ಗಣಿಯಿಂದ ಹೆಕ್ಕಿ ತೆಗೆದು ಜೋಡಣೆ ಮಾಡ ಹೊರಟಿದ್ದೇನೆ.
No comments:
Post a Comment